ಸೋಮವಾರಪೇಟೆ, ಏ. ೧೬: ಸಮೀಪದ ಶಾಂತಳ್ಳಿ ಗ್ರಾಮದ ಬಸವನಕಟ್ಟೆ ಡಾ. ಅಂಬೇಡ್ಕರ್ ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಹೋಬಳಿ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಸವಿತ ವಿಜಯ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪ್ರಮುಖರಾದ ಬೋಪಯ್ಯ ವಹಿಸಿದ್ದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಮುಖ್ಯ ಶಿಕ್ಷಕಿ ವಾರಿಜ ರಮೇಶ್, ಎಸ್.ಕೆ. ಜಯಮ್ಮ, ಭಾರತೀಯ ಬೌದ್ಧ ಸಮಾಜ ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ರವಿ, ಗ್ರಾ.ಪಂ. ಸದಸ್ಯ ಕೆ.ಪಿ. ಚಂಗಪ್ಪ, ಹಿರಿಯರಾದ ದೇವಯ್ಯ, ಎಸ್.ಕೆ. ಪುಟ್ಟಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.