ಕೋವರ್ ಕೊಲ್ಲಿ ಇಂದ್ರೇಶ್
ಬೆAಗಳೂರು, ಏ. ೧೭: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಂದಿನ ಆರು ತಿಂಗಳಲ್ಲಿ ಮರ ಪ್ರಾಧಿಕಾರವನ್ನು (ಣಡಿee ಚಿuಣhoಡಿiಣಥಿ) ರಚನೆ ಮಾಡಬೇ ಕೆಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಂಗಳೂರು ಮೂಲದ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಂಘವು ಈ ಕುರಿತು ಹೈ ಕೋರ್ಟಿಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಸರ್ಕಾರಿ ವಕೀಲರು ಸಲ್ಲಿಸಿರುವ ಮೆಮೊ ಪರಿಶೀಲಿ ಸಿದ ಪೀಠವು ಉತ್ತರ ಕನ್ನಡ, ಚಿಕ್ಕಮಗಳೂರು, ಚಾಮರಾಜ ನಗರ, ಶಿವಮೊಗ್ಗ, ಉಡುಪಿ, ಬೆಳಗಾವಿ ಮತ್ತು ಮಂಗ ಳೂರು ಜಿಲ್ಲೆಗಳಲ್ಲಿ ಮರ ಪ್ರಾಧಿಕಾರ ರಚಿಸಿ, ಅವುಗಳಿಗೆ ಮುಖ್ಯಸ್ಥರು ಹಾಗೂ ಸದಸ್ಯರನ್ನು ನೇಮಕ ಮಾಡಿ ೨೦೧೮ರ ಜ.೧೨ರಂದು ಸರ್ಕಾರ ಆದೇಶಿಸಿದೆ. ಆದರೆ ರಾಜ್ಯದ ಇತರ ಜಿಲ್ಲೆಗಳ ಸ್ಥಳೀಯ ಸಂಸ್ಥೆಯಲ್ಲಿ ಮರ ಪ್ರಾಧಿಕಾರ ರಚನೆ ಮಾಡಿಲ್ಲವೋ, ಅಲ್ಲಿ ಮುಂದಿನ ಆರು ತಿಂಗಳ ಒಳಗೆ ಮರ ಪ್ರಾಧಿಕಾರವನ್ನು ರಚಿಸಬೇಕು. ಅವುಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಬೇಕು. ನೇಮಕಗೊಂಡ ಮರಗಳ ಪ್ರಾಧಿಕಾರದ ಮುಖ್ಯಸ್ಥರು ಹಾಗೂ ಸದಸ್ಯರು ತಮ್ಮ ಕರ್ತವ್ಯಗಳನ್ನು ಶ್ರದ್ಧೆಯಿಂದ ನಿರ್ವ ಹಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.
ಅಲ್ಲದೆ, ಕರ್ನಾಟಕ ಮರ ಸಂರಕ್ಷಣೆ ಕಾಯ್ದೆ ಪ್ರಕಾರ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹಸಿರು ಪ್ರದೇಶ ಸಂರಕ್ಷಣೆ ಮತ್ತು ಸುಸ್ಥಿರತೆಯನ್ನು ನಿಯಂತ್ರಿಸಲು ಮರ ಪ್ರಾಧಿಕಾರ ರಚನೆ ಮಾಡುವುದು ಕಡ್ಡಾಯ. ಇದನ್ನು ಜಾರಿಗೊಳಿಸದ ಕಾರಣ ರಾಜ್ಯದಲ್ಲಿ ಹಸಿರು ಹೊದಿಕೆ ಮತ್ತು ಪರಿಸರ ಸುಸ್ಥಿರತೆಯ ಕುಸಿತಕ್ಕೆ ಕಾರಣವಾಗಿದೆ. ಹಾಗಾಗಿ, ರಾಜ್ಯ ಎಲ್ಲಾ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಗಳಲ್ಲಿ ಮರ ಪ್ರಾಧಿಕಾರ ರಚನೆ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದೆ.
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಅದರಲ್ಲೂ ನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿ ಪ್ರದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ೧೯೭೬ರ ಡಿಸೆಂಬರ್ ೪ರಂದು ಕರ್ನಾಟಕ ಮರ ಸಂರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸಿತ್ತು. ಈ ಕಾಯ್ದೆ ೧೯೭೬ರ ಸೆಕ್ಷನ್ ೩ ಅನ್ವಯ ಪ್ರತಿ ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಸಂಬAಧಿಸಿದAತೆ ಮರ ಪ್ರಾಧಿಕಾರ ರಚಿಸಿ ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಬೇಕು. ಆರ್‌ಟಿಐ ಅಡಿಯಲ್ಲಿ ಪಡೆದ ಮಾಹಿತಿ ಪ್ರಕಾರ ಮಂಗಳೂರು ನಗರ ಹೊರತುಪಡಿಸಿ, ಇತರ ಯಾವುದೇ ನಗರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಮರ ಪ್ರಾಧಿಕಾರ ರಚಿಸಿಲ್ಲ. ಅಲ್ಲದೆ ಮಂಗಳೂರು ಮರ ಪ್ರಾಧಿಕಾರವು ಕಾನೂನಿನನ್ವಯ ತ್ರೈಮಾಸಿಕ ಸಭೆ ನಡೆಸುತ್ತಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಸರ್ಕಾರ ಈ ಹಿಂದೆ ರಚಿಸಿದ್ದ ಜಿಲ್ಲಾ ಮಟ್ಟದ ಮರ ಪ್ರಾಧಿಕಾರದಲ್ಲಿ ಜಿಲ್ಲೆಗಳ ಅರಣ್ಯ ಸಂರಕ್ಷಣಾಧಿ ಕಾರಿಗಳು ಅದ್ಯಕ್ಷರಾಗಿದ್ದು ಜಿಲ್ಲಾಧಿಕಾರಿಗಳು ಕಾರ್ಯ ದರ್ಶಿ ಆಗಿದ್ದು, ಲೋಕೋಪಯೋಗಿ, ತೋಟಗಾರಿಕೆ, ಪಂಚಾಯತ್ ರಾಜ್ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸದಸ್ಯರಾಗಿರುತ್ತಿದ್ದರು. ಜಿಲ್ಲೆಗಳಲ್ಲಿ ಹೆಚ್ಚಿನ ಮರ ಪ್ರಾಧಿಕಾರ ರಚನೆ ಮಾಡಿದರೆ ಮುನಿಸಿಪಲ್ ಕಮಿಷನರ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳೂ ಮರ ಪ್ರಾಧಿಕಾರದ ಸದಸ್ಯರಾಗಲಿದ್ದಾರೆ.