ಕೂಡಿಗೆ, ಏ. ೧೭: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಡಿಭಾಗವಾದ ಮೂಡಲಕೊಪ್ಪಲು ಗ್ರಾಮದಲ್ಲಿ ಶ್ರೀ ಕಾಳಿಕಾಂಬ ತಾಯಿಯ ಹಬ್ಬ ಹಾಗೂ ಉತ್ಸವ ತಾ. ೧೮ ರಂದು (ಇಂದು) ದೇವಾಲಯದ ಆವರಣದಲ್ಲಿ ನಡೆಯಲಿದೆ.
ದುರ್ಗಾ ಹೋಮ, ಮೃತ್ಯುಂಜಯ ಹೋಮ, ಕಾಳಿಕಾಂಬ ತಾಯಿಗೆ ವಿವಿಧ ಬಗೆಯ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ರಾಜು ತಿಳಿಸಿದ್ದಾರೆ.
ತಾ.೧೯ ರಂದು ಕಾಳಿಕಾಂಬ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಸೇರಿದಂತೆ ವಿವಿಧ ಕ್ರೀಡಾಕೂಟಗಳು ದೇವಾಲಯದ ಕ್ರೀಡಾಂಗಣದಲ್ಲಿ ನಡೆಯಲಿವೆ ಎಂದು ದೇವಾಲಯ ಸಮಿತಿ ಕಾರ್ಯದರ್ಶಿ ಎಂ.ಎಸ್ ಪಾಪಣ್ಣ ತಿಳಿಸಿದ್ದಾರೆ.