ಮಡಿಕೇರಿ, ಏ. ೧೭ : ಮಡಿಕೇರಿ ಲಾರಿ ಚಾಲಕರು ಹಾಗೂ ಮಾಲೀಕರ ಮುಷ್ಕರ ಹಿನ್ನೆಲೆ ಸಾರಿಗೆ ಇಲಾಖೆಯಿಂದ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ತಾ. ೧೪ರಿಂದ ಅನಿರ್ದಿಷ್ಟಾವಧಿಗೆ ಲಾರಿ ಮುಷ್ಕರ ನಡೆಯುತ್ತಿರುವುದರಿಂದ ಸಾರಿಗೆ ಇಲಾಖೆ ವತಿಯಿಂದ ಕಂಟ್ರೋಲ್ ರೂಂ ಸ್ಥಾಪನೆಯಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ೨೪*೭ ಕಚೇರಿಯಲ್ಲಿ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತದೆ. ತುರ್ತು ಸೇವೆಗೆ ಸಾರ್ವಜನಿಕರು ಕಚೇರಿ ದೂರವಾಣಿ ಸಂಖ್ಯೆ ೦೮೨೭೨-೨೨೫೭೮೫ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.