ಪಹಲ್ಲಾಮ್‌ನಲ್ಲಿ ಭಯೋತ್ಪಾದಕÀ ದಾಳಿ - ಹಲವರ ಸಾವು

ಶ್ರೀನಗರ, ಏ. ೨೨: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್‌ನಲ್ಲಿ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹಲವು ಮಂದಿ ಮೃತಪಟ್ಟಿದ್ದು, ಕನಿಷ್ಟ ೨೦ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಹಲ್ಲಾಮ್ ಪಟ್ಟಣದ ಬೈಸರನ್ ಹುಲ್ಲುಗಾವಲಿನ ಪ್ರದೇಶದಲ್ಲಿ ಮಧ್ಯಾಹ್ನ ೩ ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಟ್ರಕಿಂಗ್‌ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದAತೆ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಸ್ಥಳಾಂತರಿಸಲಾಗಿದೆ. ೧೨ ಮಂದಿ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣವೇ ಭದ್ರತಾ ಪಡೆ, ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದರು. ದಾಳಿಕೋರರ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಲವಾಗಿ ಖಂಡಿಸಿದ್ದಾರೆ.

ಶ್ರೀನಗರಕ್ಕೆ ಅಮಿತ್ ಷಾ ಭೇಟಿ - ಭಯೋತ್ಪಾಧಕರ ವಿರುದ್ಧ ಕಠಿಣ ಕ್ರಮ

ನವದೆಹಲಿ, ಏ. ೨೨: ಪಹಲ್‌ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಸರೆನ್ಸ್ ನಡೆಸಿದ ನಂತರ ಶ್ರೀನಗರಕ್ಕೆ ತೆರಳಿದರು ಎಂದು ಮೂಲಗಳು ತಿಳಿಸಿವೆ. ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಹಲ್‌ಗಾಮ್‌ನ ಪರಿಸ್ಥಿತಿಯನ್ನು ಅಮಿತ್ ಶಾ ವಿವರಿಸಿದ್ದಾರೆ. ಅಧಿಕಾರಿಗಳು ನೀಡಿದ ಪ್ರಾಥಮಿಕ ವರದಿಯನ್ನು ಅವರಿಗೆ ತಿಳಿಸಿದ್ದಾರೆ ಎಂದೆನ್ನಲಾಗಿದೆ. ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟವರ ಕುಟುಂಬದೊAದಿಗೆ ಈ ಕಷ್ಟಕಾಲದಲ್ಲಿ ನಾವಿದ್ದೇವೆ. ಈ ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ. ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾ ಭರವಸೆ ನೀಡಿದ್ದಾರೆ.

ಗುಂಡಿನ ದಾಳಿಗೆ ಕನ್ನಡಿಗ ಬಲಿ

ಬೆಂಗಳೂರು, ಏ. ೨೨: ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಬಲಿಯಾಗಿದ್ದು, ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ರೂರ್ಕೆಲಾ, ಏ. ೨೨: ಮೂವರು ದುಷ್ಕರ್ಮಿಗಳು ೧೫ ವರ್ಷದ ಬಾಲಕಿಯನ್ನು ಹಳ್ಳಿಯ ರಸ್ತೆಯಿಂದ ವಾಹನದಲ್ಲಿ ಅಪಹರಿಸಿ, ಒಡಿಶಾದ ರೂರ್ಕೆಲಾದಿಂದ ಸುಮಾರು ೧೩೦ ಕಿ.ಮೀ ದೂರದಲ್ಲಿರುವ ತಲ್ಸಾರಾ ಪ್ರದೇಶದ ಕಾಡಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಕಳೆದ ಮಧ್ಯರಾತ್ರಿ ಘಟನೆ ನಡೆದಿದ್ದು, ಮೌಖಿಕ ದೂರಿನ ಆಧಾರದ ಮೇಲೆ ಮೂವರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ತಾ. ೨೧ ರಂದು ತಡರಾತ್ರಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂತ್ರಸ್ತ ಬಾಲಕಿ ಇತರ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ತಮ್ಮ ಮನೆಗಳಿಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪಹರಿಸಿದ್ದಾರೆ ಎಂದು ಸುಂದರಗಢ ಎಸ್ಪಿ ಪ್ರತ್ಯೂಷ್ ದಿವಾಕರ್ ಅವರು ಹೇಳಿದ್ದಾರೆ. ಇಬ್ಬರು ಯುವಕರು ಮತ್ತು ಇಬ್ಬರು ಬಾಲಕಿಯರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸಂತ್ರಸ್ತ ಬಾಲಕಿಯನ್ನು ಬಲವಂತವಾಗಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.

ಮಣಿಪುರದಲ್ಲಿ ನಾಲ್ವರು ಉಗ್ರರ ಬಂಧನ

ಇAಫಾಲ, ಏ. ೨೨: ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವಿವಿಧ ಕಡೆಗಳಲ್ಲಿ ನಿಷೇಧಿತ ಸಂಘಟನೆಯ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. PಖಇPಂಏ (ಠಿಡಿo) ಸಂಘಟನೆಗೆ ಸೇರಿದ ಮಹಿಳೆ ಸೇರಿದಂತೆ ಮೂವರು ಉಗ್ರರನ್ನು ನಗಖಪತ್ ಅಡ್ವೆಂಚರ್ ಖರೋಕ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಬಂಧಿತರಿAದ ಐದು ಕಾಟ್ರಿಡ್ಜ್ಗಳು, ೩೨ ಪಿಸ್ತೂಲ್‌ಗಳು, ಆರು ಮೊಬೈಲ್ ಫೋನ್‌ಗಳು ಮತ್ತು ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಇತ್ತೀಚಿಗೆ ಇಂಫಾಲ್ ಪೂರ್ವ ಜಿಲ್ಲೆಯ ನವೋರೆಮ್ ಬಿರಾಹರಿ ಕಾಲೇಜಿನ ಬಳಿ ಸುಲಿಗೆಗಾಗಿ ಇಬ್ಬರು ವ್ಯಕ್ತಿಗಳನ್ನು ಅಪಹರಿಸಿದ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಮತ್ತೋರ್ವ ಉಗ್ರನನ್ನು ಇಂಫಾಲ್ ಪೂರ್ವ ಜಿಲ್ಲೆಯ ಸಾವೊಂಬAಗ್‌ನಿAದ ಭಾನುವಾರ ಬಂಧಿಸಲಾಗಿತ್ತು. ಈ ಮಧ್ಯೆ ತೆಂಗ್ನೌಪಾಲ್ ಜಿಲ್ಲೆಯ ಯಾಂಗೌಬAಗ್ ಮತ್ತು ಟಿ ಬೊಂಗ್ಮೋಲ್ ಗ್ರಾಮಗಳಲ್ಲಿ ಶನಿವಾರ ನಡೆದ ಶೋಧ ಕಾರ್ಯಾಚರಣೆ ವೇಳೆ ೨೨ ಐಇಡಿಗಳು, ಏಳು ಮೊಬೈಲ್ ಫೋನ್ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗುವಾಹಟಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ

ಗುವಾಹಟಿ, ಏ. ೨೩: ಗುವಾಹಟಿ ಹೈಕೋರ್ಟ್ಗೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಬೆದರಿಕೆ ಸಂದೇಶ ಬಂದ ತಕ್ಷಣ ನಾವು ಹೈಕೋರ್ಟ್ಗೆ ತಂಡವನ್ನು ರವಾನಿಸಿದ್ದೇವೆ. ತಜ್ಞರು ಆವರಣದ ಪ್ರತಿಯೊಂದು ಮೂಲೆಯನ್ನೂ ಪರಿಶೀಲಿಸಿದರು. ಯಾವುದೇ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಆಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಮದ್ರಾಸ್ ಟೈಗರ್ಸ್' ಎಂಬ ಅಪರಿಚಿತ ಸಂಘಟನೆಯಿAದ ಇಮೇಲ್ ಬಂದಿದ್ದು. ಇಡೀ ಕಟ್ಟಡವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಬೆದರಿಕೆಯಿಂದ ನ್ಯಾಯಾಲಯದ ಕಾರ್ಯಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗಿಲ್ಲ. ನಿಗದಿಯಂತೆ ನ್ಯಾಯಮೂರ್ತಿಗಳು ಪ್ರಕರಣಗಳನ್ನು ಆಲಿಸಿದರು.

ವಿಮಾನ ಪತನ - ಪೈಲೆಟ್ ಸಾವು

ಅಮ್ರೇಲಿ, ಏ. ೨೨: ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ವಸತಿ ಪ್ರದೇಶದಲ್ಲಿ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಟ್ರೆöÊನಿ ಪೈಲಟ್ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಅಮ್ರೇಲಿಯಲ್ಲಿ ನಡೆದಿದೆ. ಮಧ್ಯಾಹ್ನ ೧೨.೩೦ ರ ಸುಮಾರಿಗೆ ಅಮ್ರೇಲಿ ಪಟ್ಟಣದ ಗಿರಿಯಾ ರಸ್ತೆಯ ವಸತಿ ಪ್ರದೇಶದಲ್ಲಿನ ಮರವೊಂದರ ಮೇಲೆ ಬಿದ್ದ ವಿಮಾನ ತದನಂತರ ನೆಲಕ್ಕೆ ಬಿದ್ದು ಪತನ ಗೊಂಡಿದೆ. ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಪಘಾತ ಸಂಭವಿಸಿದಾಗ ಪೈಲಟ್ ಒಬ್ಬರೇ ವಿಮಾನದಲ್ಲಿದ್ದರು ಎನ್ನಲಾಗಿದೆ. ವಿಮಾನ ಅಮ್ರೇಲಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ಶಾಸ್ತಿçನಗರದ ಬಳಿ ಬಳಿ ಪತನಗೊಂಡ ನಂತರ ಅದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ.

ರಿಕ್ಕಿ ರೈ ಮೇಲೆ ದಾಳಿ ಪ್ರಕರಣ-ಅನುರಾಧ ನಿರಾಳ

ಬೆಂಗಳೂರು, ಏ. ೨೨: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ತಾಲೂಕಿನ ಬಿಡದಿ ಬಳಿ ನಡೆದ ಗುಂಡಿನ ದಾಳಿಗೆ ಸಂಬAಧಿಸಿದAತೆ, ಕರ್ನಾಟಕ ಹೈಕೋರ್ಟ್ ಮಂಗಳವಾರ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಅವರಿಗೆ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಪೀಠವು, ಅನುರಾಧ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ. ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅನುರಾಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.