ಮಡಿಕೇರಿ, ಏ. ೨೩: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ನೊಂದ ಮಹಿಳೆಯರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ಸಲಹೆ - ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೪೧೯ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೪೧೧ ಪ್ರಕರಣಗಳು ಇತ್ಯರ್ಥಗೊಂಡಿವೆ. ೨೦೨೪-೨೫ನೇ ಆರ್ಥಿಕ ಸಾಲಿನಲ್ಲಿ ೩೦೧ ಪ್ರಕರಣಗಳು ದಾಖಲಾಗಿ, ೨೯೩ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ ೮ ಪ್ರಕರಣಗಳು ಇತ್ಯರ್ಥದ ಹಂತದಲ್ಲಿವೆ.
ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೧೨,೦೦,೫೦೦ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೪-೨೫ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.