ಮಡಿಕೇರಿ, ಏ. ೨೪: ಜಮ್ಮು ಕಾಶ್ಮೀರದ ಪೆಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಮಡಿದವರಿಗೆ ಜಿಲ್ಲಾ ಯುವ ಕಾಂಗ್ರೆಸ್ನಿAದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಜ. ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಮೇಣದ ಬತ್ತಿ ಬೆಳಗಿಸಿ, ಮೌನಾಚರಣೆ ಸಲ್ಲಿಸಿ ಕಂಬನಿ ಮಿಡಿದರು. ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಮ್ಮಡ ಸೋಮಣ್ಣ, ಪ್ರಧಾನ ಕಾರ್ಯದರ್ಶಿ ಹಕೀಂ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಕ್ಷಿತ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಲ್ಲಂಡ ಧ್ಯಾನ್ ದೇವಯ್ಯ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅನೂಪ್ ಕುಮಾರ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕವನ್ ಕೊತ್ತೋಳಿ, ಅಲ್ಪಸಂಖ್ಯಾತ ಘಟಕ ಜಿಲ್ಲಾ ಉಪಾಧ್ಯಕ್ಷ ಖಲೀಲ್ ಭಾಷಾ ಸೇರಿದಂತೆ ಇನ್ನಿತರರಿದ್ದರು.