ಪೊನ್ನಂಪೇಟೆ, ಏ. ೨೫: ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ ಮಂದೆಯAಡ ನಾಣಯ್ಯ ಮತ್ತು ಪೊನ್ನಮ್ಮ ದಂಪತಿಯ ಪುತ್ರ ಮಂದೆಯAಡ ವನಿತ್ ಕುಮಾರ್ ಎಂ. ಎನ್. ಅವರು ಪಿ.ಹೆಚ್.ಡಿ ಪದವಿ ಪಡೆದುಕೊಂಡಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ನಾಗರಾಜು ಜಿ.ಹೆಚ್. ಮಾರ್ಗದರ್ಶನದಲ್ಲಿ ‘ಕರ್ನಾಟಕದಲ್ಲಿ ಮೂರು ಹಂತದ ವ್ಯವಸ್ಥೆ- ಮೈಸೂರು ಜಿಲ್ಲಾ ಪಂಚಾಯಿತಿ ಕುರಿತು ಒಂದು ಅಧ್ಯಯನ’ ಎಂಬ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ದ್ರಾವಿಡ ವಿಶ್ವವಿದ್ಯಾಲಯ ಪಿ.ಹೆಚ್.ಡಿ. ಪದವಿ ನೀಡಿದೆ. ವನಿತ್ ಕುಮಾರ್ ಪ್ರಸ್ತುತ ಹುಣಸೂರು ಡಿ. ದೇವರಾಜ್ ಅರಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತç ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ಗೋಣಿಕೊಪ್ಪಲು ಕಾವೇರಿ ಕಾಲೇಜು, ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದರು.