ಸಿದ್ದಾಪುರ, ಏ ೨೫ : ಪಾಲಿಬೆಟ್ಟ ಸಮೀಪದ ಮೇಕೂರು ಹೊಸ್ಕೇರಿ ಗ್ರಾಮದ ಎಮ್ಮೆಗುಂಡಿ ಕಾಫಿ ತೋಟದ ಕಾರ್ಮಿಕ ಚೆಲ್ಲಾ ದೊರೆ ಮೇಸ್ತಿç ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಮೇಕೂರು ಹೊಸಕೇರಿ ಗ್ರಾಮದ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಿತು.
ಗುರುವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳುತ್ತಿದ್ದ ಚೆಲ್ಲಾ ದೊರೆ ಮೇಸ್ತ್ರಿ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿತ್ತು. ಕಾಡಾನೆಗಳ ಗುಂಪಿನಲ್ಲಿದ್ದ ಕಾಡಾನೆಗಳು ಬೇರ್ಪಟ್ಟು ಮಾರಿಯಾನೆಗಳು ಸೇರಿದಂತೆ ೨೦ಕ್ಕೂ ಅಧಿಕ ಕಾಡಾನೆಗಳು ಕಾಫಿ ತೋಟಗಳಲ್ಲಿ ಸುತ್ತಾಡುತ್ತಿದ್ದು, ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ.
ಗುರುವಾರ ರಾತ್ರಿಯಿಂದಲೇ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎ.ಸಿ.ಎಫ್. ಗೋಪಾಲ್ ಮಾರ್ಗದರ್ಶನದಲ್ಲಿ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದಲ್ಲಿ ಉಪವಲಯ ಅಧಿಕಾರಿ ಶಶಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಕಾಡಾನೆಗಳು ಗುಂಪಿನಿAದ ಬೇರ್ಪಟ್ಟು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸುತ್ತಾಡುತ್ತಿವೆ.
ಕಾಡಾನೆ ದಾಳಿ ನಡೆಸಿ ಚೆಲ್ಲಾ ದೊರೆ ಮೇಸ್ತಿçಯನ್ನು ಹತ್ಯೆ ಮಾಡಿದ ಘಟನೆ ಸ್ಥಳದಲ್ಲಿ ರಾತ್ರಿ ಸಮಯದಲ್ಲಿ ಕಾಡಾನೆಗಳು ಬಂದು ಘೀಳಿಡುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.