ಮಡಿಕೇರಿ, ಏ. ೨೬: ಮಡಿಕೇರಿ ತಾಲೂಕು ಬಿಳಿಗೇರಿ ಗ್ರಾಮದ ಶ್ರೀ ಅರ್ಧನಾರೀಶ್ವರ ದೇವಾಲಯದ ವಾರ್ಷಿಕೋತ್ಸವ ತಾ. ೨೭ ರಿಂದ (ಇಂದಿನಿAದ) ಮೇ ೧ ರವರೆಗೆ ನಡೆಯಲಿದೆ.

ಉತ್ಸವದ ಅಂಗವಾಗಿ ತಾ. ೨೭ ರಂದು ಬೆಳಿಗ್ಗೆ ೬.೩೦ ಗಂಟೆಗೆ ಬೊಟ್ಲಪ್ಪ ದೇವಾಲಯದಿಂದ ತೀರ್ಥ ತರುವುದು, ಗಣಪತಿ ಹೋಮ, ದೇವರಿಗೆ ಅಭಿಷೆೆÃಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೬ ಗಂಟೆಗೆ ದೇವರ ಭಂಡಾರ ತರುವುದು, ದೇವರು ಬಲಿಬರುವುದು, ಅಂದಿಬೊಳಕ್, ಅನ್ನಸಂತರ್ಪಣೆ ನಡೆಯಲಿದೆ. ತಾ. ೨೮ ರಂದು ಬೆಳಿಗ್ಗೆ ೫ ಗಂಟೆಗೆ ದೇವರು ನೃತ್ಯ ಬಲಿ ಬರುವುದು, ೧೦ ಗಂಟೆಗೆ ಹಬ್ಬದ ಕಟ್ಟು ಮುರಿಯುವುದು, ಮಹಾಪೂಜೆ, ದೇವರ ನೆರಪು ಬಲಿ ಬರುವುದು, ವಸಂತ ಪೂಜೆ, ದೇವರ ಶಯನ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೪ ಗಂಟೆಗೆ ದೇವರ ಜಳಕ ಕಾರ್ಯ ನಡೆಯಲಿದೆ. ಬಳಿಕ ದೇವರ ನೃತ್ಯ ಬಲಿ ನಡೆಯಲಿದ್ದು, ನಂತರ ಅನ್ನಸಂತರ್ಪಣೆ.

ತಾ. ೨೯ ರಂದು ಬೆಳಿಗ್ಗೆ ೧೦ ಗಂಟೆಗೆ ಶುದ್ಧ ಕಲಶ, ಮಹಾಪೂಜೆ, ಅನ್ನಸಂತರ್ಪಣೆ. ತಾ. ೩೦ ರಂದು ಸಂಜೆ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ತೋತಬರುವುದು, ಮೇಲೇರಿಗೆ ಅಗ್ನಿಸ್ಪರ್ಶ ನಡೆಯಲಿದೆ.

ಮೇ ೧ ರಂದು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಮೇಲೇರಿ ಹಾಗೂ ಅಜ್ಜಪ್ಪ ದೈವದ ಕೋಲ, ಮಧ್ಯಾಹ್ನ ೨.೩೦ ಗಂಟೆಗೆ ದೇವರಿಗೆ ಬೇಟೆಯ ಸಾಂಪ್ರದಾಯಿಕ ಆಚರಣೆ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.